ಯೆರೆಮಿಯನ ಮೂರನೆಯ ವಿಖ್ಯಾಪನೆ - 15:10-21
ಪಠ್ಯಭಾಗ: ಯೆರೆಮಿಯ 15:10-21 10 “ನನ್ನ ಹೆತ್ತತಾಯೇ, ನನ್ನ ಗತಿಯನ್ನು ಏನು ಹೇಳಲಿ! ಜಗದ ಜನರಿಗೆಲ್ಲ ನಾನೊಬ್ಬ ಜಗಳಗಂಟಿಗ, ವ್ಯಾಜ್ಯಗಾರ. ನಾನು ಹಣವನ್ನು ಸಾಲವಾಗಿ ಕೊಟ್ಟವನಲ್ಲ, ಕೊಂಡವನೂ ಅಲ್ಲ. ಆದರೂ ನನ್ನನ್ನು ಎಲ್ಲರು ಶಪಿಸುವವರೇ. 11 ಸರ್ವೇಶ್ವರಾ, ನಾನು ನಿಮಗೆ ಶ್ರೇಷ್ಠವಾದ ಸೇವೆಸಲ್ಲಿಸದೆ ಹೋಗಿದ್ದರೆ, ನನ್ನ ಶತ್ರುಗಳು ಕಷ್ಟಸಂಕಟಗಳಲ್ಲಿ ಸಿಕ್ಕಿಬಿದ್ದ ಕಾಲದಲ್ಲಿ ಅವರ ಪರವಾಗಿ ನಿನಗೆ ಮೊರೆಯಿಡದೆ ಇದ್ದಿದ್ದರೆ ನನಗೆ ಶಾಪ ತಗುಲಲಿ! 12 ಕಬ್ಬಿಣವನ್ನು ಅದೂ ಉತ್ತರದಿಂದ ಬಂದ ಕಬ್ಬಿಣವನ್ನು ಹಾಗು ಕಂಚನ್ನು ಬಗ್ಗಿಸಲು ಯಾರಿಂದಾದೀತು?” 13 ಸರ್ವೇಶ್ವರ: “ನಾಡಿನಾದ್ಯಂತ ನನ್ನ ಜನರು ಮಾಡಿದ ಎಲ್ಲ ಪಾಪಗಳ ನಿಮಿತ್ತ ಅವರ ಸೊತ್ತು ಸಂಪತ್ತನ್ನು ಪುಕ್ಕಟೆಯಾಗಿ ಕೊಳ್ಳೆಗಾರರ ಪಾಲಾಗಿಸುವೆನು. 14 ಅಪರಿಚಿತ ನಾಡಿಗೆ ಅವರನ್ನು ಸಾಗಿಸುವೆನು. ಅಲ್ಲಿ ಶತ್ರುಗಳಿಗೇ ಊಳಿಗದವರನ್ನಾಗಿಸುವೆನು. ಏಕೆಂದರೆ ನನ್ನ ಕೋಪಾಗ್ನಿ ಉರಿಯುತ್ತಿದೆ. ಅದು ನಿಮ್ಮನ್ನು ಸುಟ್ಟುಹಾಕುವುದು.” 15 ಅದಕ್ಕೆ ನಾನು: “ಸರ್ವೇಶ್ವರಾ, ನೀವು ಎಲ್ಲವನ್ನು ಬಲ್ಲವರು. ನನ್ನನ್ನು ನೆನಪಿಗೆ ತಂದುಕೊಂಡು ನೆರವು ನೀಡಿ. ನನಗಾಗಿ ನನ್ನ ಶತ್ರುಗಳಿಗೆ ಮುಯ್ಯಿತೀರಿಸಿರಿ. ಅವರಿಗೆ ಹೆಚ್ಚು ತಾಳ್ಮೆ ತೋರಿ ನನ್ನನ್ನು ನಿರ್ಮೂಲಮಾಡಬೇಡಿ. ನಿಮ್ಮ ನಿಮಿತ್ತವೇ ನಾನು ನಿಂದೆಗೆ ಗುರಿಯಾದೆ ಎಂಬುದನ್ನು ಜ್ಞಾಪಕಕ್ಕೆ ತಂದು...