ಯೆರೆಮಿಯನ ಐದನೆಯ ವಿಖ್ಯಾಪನೆ – ಯೆರೆ 18: 18-23
ಪಠ್ಯ: ಯೆರೆಮಿಯ 18: 18-23 18 ಆಗ ಜನರು, “ಬನ್ನಿ, ಈ ಯೆರೆಮಿಯನ ವಿರುದ್ಧ ಒಳಸಂಚುಮಾಡೋಣ. ಧರ್ಮೋಪದೇಶಕ್ಕೆ ಯಾಜಕರಿದ್ದಾರೆ. ಮಂತ್ರಾಲೋಚನೆಗೆ ಜ್ಞಾನಿಗಳಿದ್ದಾರೆ. ದೈವೋಕ್ತಿಗೆ ಪ್ರವಾದಿಯ ಕೊರತೆ ಎಂದಿಗೂ ಇಲ್ಲ. ಬನ್ನಿ, ಇವನ ಬಾಯಿ ಬಡಿಯೋಣ. ಇವನ ಯಾವ ಮಾತಿಗೂ ನಾವು ಕಿವಿಗೊಡಬೇಕಾಗಿಲ್ಲ,” ಎಂದುಕೊಂಡರು. 19 ಯೆರೆಮಿಯ: “ಸರ್ವೇಶ್ವರಾ, ನನ್ನ ಕಡೆಗೆ ಕಿವಿಗೊಡಿ. ನನ್ನೊಡನೆ ವಾದಿಸುವವರ ಮಾತನ್ನು ಗಮನಿಸಿ ನೋಡಿ. 20 ಮಾಡಿದ ಮೇಲಿಗೆ ಕೇಡಿನ ಪ್ರತಿಫಲವೆ? ನನ್ನ ಪ್ರಾಣ ಹಿಡಿಯಲು ಗುಂಡಿಯನ್ನು ತೋಡಿದ್ದಾರೆ. ಅವರ ಮೇಲೆ ನಿಮಗಿದ್ದ ಕೋಪಾವೇಶವನ್ನು ಶಮನಗೊಳಿಸಲು ನಿಮ್ಮ ಮುಂದೆ ನಿಂತು ನಾನು ವಿನಂತಿಸಿದ್ದನ್ನು ನೆನಪಿಗೆ ತಂದುಕೊಳ್ಳಿ. 21 ಆದರೆ ಈಗ ಅವರ ಮಕ್ಕಳು ಕ್ಷಾಮಕ್ಕೆ ಗುರಿಯಾಗಲಿ. ಕತ್ತಿಗೆ ತುತ್ತಾಗಲಿ. ಅವರ ಮಡದಿಯರು ವಿಧವೆಯರಾಗಲಿ, ಮಕ್ಕಳನ್ನು ಕಳೆದುಕೊಳ್ಳಲಿ, ಅವರ ಗಂಡಂದಿರು ಸತ್ತುಬೀಳಲಿ. ಯುವಕರು ಕಾಳಗ-ಕತ್ತಿಗೆ ಬಲಿಯಾಗಲಿ. 22 ಕಳ್ಳಕಾಕರ ಗುಂಪು ಫಕ್ಕನೆ ಅವರ ಮೇಲೆ ಬೀಳಲಿ. ಅವರ ಮನೆಮಠಗಳಿಂದ ಕಿರಿಚಾಟ ಕೇಳಿಬರಲಿ. ಅವರು ನನ್ನನ್ನು ಕೆಡವಲು ಗುಂಡಿಯನ್ನು ತೋಡಿದ್ದಾರೆ. ನನ್ನ ಕಾಲುಗಳಿಗೆ ಉರುಲನ್ನು ಗುಟ್ಟಾಗಿ ಒಡ್ಡಿದ್ದಾರೆ. 23 ಸರ್ವೇಶ್ವರಾ, ನನ್ನನ್ನು ಕೊಲ್ಲಲು ಅವರು ಮಾಡಿಕೊಂಡಿರುವ ಸಂಚು ನಿಮಗೆ ತಿಳಿದಿದೆ. ಅವರ ಅಪರಾಧವನ್ನು ಕ್ಷಮಿಸಬೇಡಿ, ಅವರ ಪಾಪವನ...